×
1908: ಕೆಂಗಲ್ ಹನುಮಂತಯ್ಯನವರು ರಾಮನಗರದ ಬಳಿಯ ಲಕ್ಕಪ್ಪನಹಳ್ಳಿಯಲ್ಲಿ ಜನಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕದ ಎರಡನೇ ಮುಖ್ಯಮಂತ್ರಿಗಳಾಗಿ, ಕೇಂದ್ರ ರೈಲ್ವೇ ಮತ್ತು ಕೈಗಾರಿಕಾ ಮಂತ್ರಿಗಳಾಗಿ ಮತ್ತು ವಿಧಾನಸೌಧದ ನಿರ್ಮಾಣಕ್ಕೆ ಕಾರಣಕರ್ತರಾಗಿ ಪ್ರಸಿದ್ಧಿ ಪಡೆದಿದ್ದಾರೆ.
2005: ಖ್ಯಾತ ಶಿಕ್ಷಣ ತಜ್ಞ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭೌತಶಾಸ್ತ್ರಜ್ಞ ಡಾ. ಎಚ್. ನರಸಿಂಹಯ್ಯ ಬೆಂಗಳೂರಿನಲ್ಲಿ ನಿಧನರಾದರು. ಭೌತಶಾಸ್ತ್ರ ಅಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ, ಕರ್ನಾಟಕದಲ್ಲಿನ ನ್ಯಾಷನಲ್ ಎಜುಕೇಷನ್ ಸೊಸೈಟಿಯ ...